ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರ ಪತ್ನಿ ಅಪೇಕ್ಷಾ ಪುರೋಹಿತ್ ಗುರುವಾರ (ಡಿ.10) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಪವನ್ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ತಂದೆಯಾದ ನಿರ್ದೇಶಕನಿಗೆ ಅಭಿಮಾನಿಗಳು, ಸ್ನೇಹಿತರು, ಅಭಿನಂದನೆ ಸಲ್ಲಿಸುತ್ತಿದ್ದಾರೆ.
ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.
World's most wonderful gift on my birthday. Blessed with baby boy. 🙂
Jai Chamundeshwari. @PurohitApeksha pic.twitter.com/XbRMaXBWSm— Pavan Wadeyar (@PavanWadeyar) December 9, 2020
ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ ತಮ್ಮ ಇನ್ಸ್ಟಾ, ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದಾರೆ.
2017ರಲ್ಲಿ ಅಪೇಕ್ಷಾ ಮತ್ತು ಪವನ್ ಒಡೆಯರ್ ನಿಶ್ಚಿತಾರ್ಥ ನೆರವೇರಿತ್ತು. 2018ರ ಆಗಸ್ಟ್ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಅಪೇಕ್ಷಾ ಕೂಡ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
