fbpx
ಸಮಾಚಾರ

ರೈಲ್ವೆ ನೇಮಕಾತಿ 2020: 1004 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಸೆಲ್‌, ಹುಬ್ಬಳ್ಳಿ ನೈರುತ್ಯ ರೈಲ್ವೆಯಲ್ಲಿ ಅಗತ್ಯ ಅಪ್ರೆಂಟಿಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಉಳ್ಳ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ಸಿಗಲಿದೆ.

ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
-ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://jobs.rrchubli.in/ActApprentice2020-21/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top