fbpx
ಸಮಾಚಾರ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರೆ ಗಮನಿಸಿ: ನಾಲ್ಕು ದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ

ಕುಕ್ಕೆ‌ ಸುಬ್ರಹ್ಕಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಸಂಭ್ರಮ ಹಿನ್ನೆಲೆ ಶ್ರೀಕ್ಷೇತ್ರ ಕುಕ್ಕೆಗೆ ನಾಲ್ಕು ದಿನಗಳ ಕಾಲ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕೋವಿಡ್ ಎರಡನೇ ಅಲೆಯ ಆತಂಕದ ಹಿನ್ನೆಲೆ ಪ್ರವೇಶ ನಿಷೇಧ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅದೇಶ ನೀಡಿದ್ದಾರೆ. ದೇವಾಲಯಕ್ಕೆ ಹಾಗೂ ರಥಬೀದಿಗೆ ಡಿಸೆಂಬರ್ 17ರಿಂದ 20 ವರೆಗೆ ಪ್ರವೇಶ ನಿಷೇಧ ಮಾಡಿ ಆದೇಶ ನೀಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ಶ್ರೀ ದೇವಳಕ್ಕೆ ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿ ಯತೀಶ್ ಉಳ್ಳಾಲ್ ವಿನಂತಿ ಮೇರೆಗೆ ಮುಂಗಡ ನೋಂದಣಿ ಅವಕಾಶ ಪ್ರಕಟಣೆ ಹೊರಡಿಸಿದ್ದು, 50 ಸಾವಿರಕ್ಕೂ ಹೆಚ್ಚಿನ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top