fbpx
ಸಮಾಚಾರ

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

ಕರ್ನಾಟಕದ ದಿವಂಗತ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಸಚಿವ ಸಂಪುಟದಲ್ಲಿ 1980 ರಿಂದ 1983ರ ಅವಧಿಯಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿ ರಾಜ್ಯ ರಾಜಕೀಯದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ದಿಢೀರ್ ಹೃದಯಾಘಾತದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಗರದ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ರೇಣುಕಾ ಅವರಿಗೆ ನಿನ್ನೆ ಮಧ್ಯಾಹ್ನ ಹೃದಯಾಘಾತವಾಗಿದೆ. ಕೂಡಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕಳೆದ ರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಇಂದು(ಬುಧವಾರ) ಚಿಕ್ಕಬಳ್ಳಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರೇನುಕಾ ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನ ಅಗಲಿದ್ದಾರೆ. 1989ರಲ್ಲಿ ಮೂರನೇ ಬಾರಿಗೆ ಚಿಕ್ಕಬಳ್ಳಾಪುರ ಮೀಸಲು ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿ ಮುಖ್ಯಮಂತ್ರಿಯಾಗಿದ್ದ ಗುಂಡೂರಾವ್‌ ಸರ್ಕಾರದಲ್ಲಿ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top