fbpx
ಸಮಾಚಾರ

ಗಣರಾಜ್ಯೋತ್ಸವ ದಿನ ಅಯೋಧ್ಯಾ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ:

ಬಾಬ್ರಿ ಮಸೀದಿಗೆ ಪರ್ಯಾಯವಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಶಂಕುಸ್ಥಾಪನೆ ಗಣರಾಜ್ಯೋತ್ಸವ ದಿನಾಚರಣೆಯಂದೇ ನಡೆಯಲಿದೆ ಎಂದು ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ಸಂಘದ ಸದಸ್ಯರು ಹೇಳಿದ್ದಾರೆ.

ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.

ಮಸೀದಿ ಸಂಕೀರ್ಣ ನಿರ್ಮಾಣಕ್ಕೆ ನೀಲನಕ್ಷೆ ಸಿದ್ದವಾಗಿದ್ದು ಅದರಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡುಗೆಮನೆ, ಲೈಬ್ರೆರಿ ಇರುತ್ತದೆ, ಅದನ್ನು ಐಐಸಿಎಫ್ ಇದೇ 19ರಂದು ಅನಾವರಣಗೊಳಿಸಲಿದೆ. ಮಸೀದಿಯೊಳಗೆ ಒಂದು ಬಾರಿಗೆ 2 ಸಾವಿರ ಮಂದಿ ಸೇರುವ ಸಾಮರ್ಥ್ಯವಿರುತ್ತದೆ, ದುಂಡಗಿನ ಆಕಾರದಲ್ಲಿ ಮಸೀದಿಯ ರಚನೆಯಿರುತ್ತದೆ ಎಂದು ಮುಖ್ಯ ವಾಸ್ತುಶಿಲ್ಪಿ ಪ್ರೊ.ಎಸ್ ಎಂ ಅಖ್ತರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸರ್ವೋಚ್ಛ ನ್ಯಾಯಾಲಯ ರಾಮಜನ್ಮಭೂಮಿಗೆ ಸಂಬಂಧಿಸಿದಂತೆ ತೀರ್ಪು ನೀಡಿತ್ತು. ಅದರಂತೆಯೇ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟು ಮಸೀದಿಗಾಗಿ ಸುನ್ನಿ ವಕ್ಫ್​ ಬೋರ್ಡಿಗೆ ಉತ್ತರಪ್ರದೇಶದ ಪ್ರಮುಖ ಜಾಗವೊಂದರಲ್ಲಿ 5 ಎಕರೆ ಜಾಗ ನೀಡಲು ನಿದೇರ್ಶಿಸಿತ್ತು. ಅದರಂತೆಯೇ ರಾಜ್ಯ ಸರ್ಕಾರ ಅಯೋಧ್ಯ ಬಳಿಯ ಧನ್ನಿಪುರದಲ್ಲಿ ನೀಡಿದ ಜಾಗದಲ್ಲಿ ನೂತನ ಮಸೀದಿಯನ್ನು ಕಟ್ಟಲು ಯೋಜನೆ ರೂಪಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top