fbpx
ಸಮಾಚಾರ

“ಯಾವುದೇ ಬೆಲೆ ತೆತ್ತಾದರೂ ಸರಿ ಆ ಕ್ಷಣ ಅಲ್ಲಿರಲು ಬಯಸುತ್ತೇನೆ” ವಿರಾಟ್ ಕೊಹ್ಲಿ

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಟ್ ಕೊಹ್ಲಿ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.

ಈ ಬಗ್ಗೆ ಬಿಸಿಸಿಐ ಟಿವಿಯ ವಿಶೇಷ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಕೊಹ್ಲಿ, ಇದಕ್ಕಿಂತ ದೊಡ್ಡ ಕ್ಷಣ ಮತ್ತೊಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ. ಜೀವನದ ಅಮೂಲ್ಯ ಸಂದರ್ಭದಲ್ಲಿ ನನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದರು.

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಜೊತೆ ನಡೆಸಿದ ಸಂವಾದದಲ್ಲಿ ಪಾಲ್ಗೊಂಡಿದ್ದ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ‘ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನೀವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದ್ದು, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top