ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆಕೆ ಸಿಂಗ್ ಆಸ್ಪತ್ರೆ ಸೇರಿದ್ದಾರೆ. ಆಸ್ಪತ್ರೆಯಲ್ಲಿರುವ ಕೆಕೆ ಸಿಂಗ್ ಫೋಟೋ ವೈರಲ್ ಆಗುತ್ತಿದೆ. ಹರಿಯಾಣದ ಫರಿದಾಬಾದ್ನ ಆಸ್ಪತ್ರೆಯೊಂದರಲ್ಲಿ ಅವರು ದಾಖಲಾಗಿದ್ದಾರೆ ಎನ್ನಲಾಗಿದೆ.
Sushant's father is the main complainant in the FIR registered in Patna, the document on which the CBI inquest is based.
He is now having heart issues and hospitalised.
The stress is taking its toll.
CBI should soon declare their conclusion for the sake of this elderly gentleman. pic.twitter.com/I9dvcpcMHU— Soumyadipta (@Soumyadipta) December 19, 2020
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಅವರು ಆಸ್ಪತ್ರೆಗೆ ದಾಖಲಾಗಿರುವ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫರಿದಾಬಾದ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನ ಸುಶಾತ್ ಸಿಂಗ್ ಅಭಿಮಾನಿಗಳು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೆ.ಕೆ ಸಿಂಗ್ ಆಸ್ಪತ್ರೆಗೆ ದಾಖಲಾಗುತ್ತಿರುವ ವಿಚಾರ ವೈರಲ್ ಆದಂತೆ ಅಭಿಮಾನಿಗಳು ಬೇಗ ಹುಷಾರಾಗಿ ಎಂದು ಹಾರೈಸುತ್ತಿದ್ದಾರೆ. ಬೇಗನೆ ಚೇತರಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಹಾಕುತ್ತಿದ್ದಾರೆ. ಸದ್ಯ ಮಾಹಿತಿಯ ಪ್ರಕಾರ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
