fbpx
ಸಮಾಚಾರ

ಸಾಂಸಾರಿಕ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಸ್ಪಿನ್ ಮಾಂತ್ರಿಕ ಯುಜ್ವೇಂದ್ರ ಚಹಲ್

ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಪ್ರೇಯಸಿ ಧನಶ್ರೀ ವರ್ಮಾ ಜೊತೆಗೆ ಗುರುಗ್ರಾಮ್‌ನಲ್ಲಿ ಡಿಸೆಂಬರ್ 22ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಗ್ರಾಮ್‌ನ ಕರ್ಮ ಲೇಕ್ ರೆಸಾರ್ಟ್‌ನಲ್ಲಿ ಆಪ್ತ ವಲಯದ ಸಮ್ಮುಖದಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ.

 

 

ವಿವಾಹವಾದ ಬೆನ್ನಲ್ಲೆ ಯುಜ್ವೇಂದ್ರ ಚಹಲ್‌ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಸೇರಿದಂತೆ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ತಮ್ಮ ಪತ್ನಿ ಧನಶ್ರೀ ಅವರೊಂದಿಗಿನ ಮದುವೆ ಫೋಟೊವನ್ನು ಅಪ್‌ಲೋಡ್‌ ಮಾಡಿದ್ದಾರೆ. ಧನಶ್ರೀ ವರ್ಮಾ ಮರೂನ್ ಲೆಹೆಂಗಾದಲ್ಲಿ ಅಲಂಕರಿಸಿದ್ದರೆ, ಯುಜ್ವೇಂದ್ರ ಚಹಲ್‌ ಶೆರ್ವಾನಿ ಧರಿಸು ಹಾಗೂ ಮರೂನ್ ಪೇಟದೊಂದಿಗೆ ಫೋಟೊದಲ್ಲಿ ಕಂಗೊಳಿಸುತ್ತಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಚಹಾಲ್ ಹಾಗೂ ಧನಶ್ರಿ ವರ್ಮಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥದ ಬಳಿಕ ಚಹಾಲ್ ಹಾಗೂ ಧನಶ್ರಿ ವರ್ಮಾ ಐಪಿಎಲ್ ಟೂರ್ನಿಗಾಗಿ ದುಬೈಗೆ ತೆರಳಿದ್ದರು. ಐಪಿಎಲ್ ಟೂರ್ನಿ ವೇಳೆ ಚಹಾಲ್ ಹಾಗೂ ಧನಶ್ರಿ ವರ್ಮಾ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡಿದ್ದರು. ಧನಶ್ರಿ ವರ್ಮಾ ಜನಪ್ರಿಯ ಯೂಟ್ಯೂಬರ್, ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದಾರೆ. ನಿಶ್ಚಿತಾರ್ಥಕ್ಕೂ ಮುನ್ನವೇ ಚಹಾಲ್ ಹಾಗೂ ಧನಶ್ರಿ ವರ್ಮಾ ಡೇಟಿಂಗ್ ಮಾಡುತ್ತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top