fbpx
ಸಮಾಚಾರ

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ಕರ್ನಾಟಕ ಅಂಚೆ ವೃತ್ತದಲ್ಲಿ 2443 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಇಂಡಿಯನ್ ಪೋಸ್ಟ್‌ ಕರ್ನಾಟಕ ಅಂಚೆ ವೃತ್ತದಲ್ಲಿನ ಅಗತ್ಯ 2443 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್‌, ಡಾಕ್‌ ಸೇವಕ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಇನ್ನಷ್ಟು ವಿವರಗಳನ್ನು ತಿಳಿದು ಆನ್‌ಲೈನ್‌ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ, ಪಾಸಾಗಿರಬೇಕು. ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.

ವಯೋಮಿತಿ ಅರ್ಹತೆಗಳು
ದಿನಾಂಕ 21-12-2020 ಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top