fbpx
ಸಮಾಚಾರ

ಕೊರೊನಾ ಸೋಂಕಿನಿಂದ ಹಿರಿಯ ಕಲಾವಿದ ಶನಿ ಮಹದೇವಪ್ಪ ನಿಧನ

ಕನ್ನಡದ ಹಿರಿಯ ನಟ ಶನಿ ಮಹಾದೇವಪ್ಪ ಕೊನೆ ಉಸಿರು ಎಳೆದಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 90 ವರ್ಷದ ಶನಿ ಮಹದೇವಪ್ಪ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಂಜೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ನೆನ್ನೆ(ಭಾನುವಾರ) ಸಂಜೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶನಿ ಮಹಾದೇವಪ್ಪ ವಿಧಿ ವಶರಾಗಿದ್ದಾರೆ. ಅವರು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು (ಸೋಮವಾರ) ಸುಮನಹಳ್ಳಿಯ ಚಿತಾಗಾರದಲ್ಲಿ ಮಹದೇವಪ್ಪರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೇರು ನಟ ಡಾ ರಾಜ್​ಕುಮಾರ್ ಜೊತೆಯಲ್ಲಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹ ನಟಿಸಿದ್ದರು. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಇತರೆ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಕವಿರತ್ನ ಕಾಳಿದಾಸ ಚಿತ್ರದ ಡಿಂಡಿಮ ಪಾತ್ರ ದೊಡ್ಡ ಮಟ್ಟದ ಹೆಸರು ತಂದುಕೊಟ್ಟಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top