fbpx
ಸಮಾಚಾರ

ಸರ್ಕಾರೀ ನೌಕರರಿಗೆ ರಾಜ್ಯ ಸರ್ಕಾರದಿಂದ ಬ್ಯಾಡ್ ನ್ಯೂಸ್

2021 ಹೊಸ ವರ್ಷದ ಮೊದಲ ವಾರದಲ್ಲೇ ಸರ್ಕಾರಿ ನೌಕರರ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. 2021ನೇ ಜನವರಿ 1 ರಿಂದ ಡಿಸೆಂಬರ್ 31 ರವರೆಗಿನ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

2021ರ ಜನವರಿಯಿಂದ ಡಿಸೆಂಬರ್‍ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅರ್ಹ ಸರ್ಕಾರಿ ನೌಕರರು ಅಥವಾ ಅಧಿಕಾರಿಗಳಿಗೆ ಈ ಆದೇಶದಿಂದ ವಿನಾಯಿತಿ ಕೊಡಲಾಗಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ. ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ವರ್ಷದ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದುವ ಅಧಿಕಾರಿಗಳು, ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹಣಕಾಸು ಇಲಾಖೆ ತನ್ನ ಹೊಸ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಆದೇಶವು ಸರ್ಕಾರದಿಂದ ಅನುದಾನ ಪಡೆಯುವ ಅಥವಾ ಪಡೆಯದಿರುವ ಸರ್ಕಾರದ ಎಲ್ಲಾ ಉದ್ಯಮ ಸಂಸ್ಥೆಗಳ ನೌಕರರಿಗೂ ಅನ್ವಯಿಸಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top