fbpx
ಸಮಾಚಾರ

ಕರ್ನಾಟಕ ಮಾಜಿ ಸಿಎಂ ಗುಂಡೂರಾವ್ ಪತ್ನಿ ವಿಧಿವಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಪತ್ನಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್ (72) ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ವರಲಕ್ಷ್ಮೀ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವರಲಕ್ಷ್ಮೀ ಗುಂಡೂರಾವ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಬುಧವಾರ 6.1.2021 ರಂದು ಅವರ ದೇವನಹಳ್ಳಿ ತೋಟದಲ್ಲಿ ನಡೆಸಲು ಕುಟುಂಬದವರು ನಿಶ್ಚಯಿಸಿದ್ದಾರೆ. ಇಂದು ದೇವನಹಳ್ಳಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಂದಹಾಗೆ ದಿ. ಗುಂಡೂರಾವ್ ಅವರು 1993ರ ಆಗಸ್ಟ್‌ ನಲ್ಲಿ ನಿಧನರಾಗಿದ್ದರು. ಅವರ ನಿಧನದ ನಂತರ 1996ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಇಳಿದಿದ್ದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅನಂತಕುಮಾರ್ ಎದುರು ಸೋಲು ಅನುಭವಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top