fbpx
ಸಮಾಚಾರ

“ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತೀಯಾ ಗೊತ್ತಾ, ರಾಸ್ಕಲ್” ಅಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟ ಸಚಿವ ಮಾಧುಸ್ವಾಮಿ

ಕೆಲವು ತಿಂಗಳುಗಳ ಹಿಂದೆ ಕೋಲಾರದಲ್ಲಿ ರೈತ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ (ರಾಸ್ಕಲ್​) ಎಂದು ನಿಂದಿಸಿ, ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಮಾಧುಸ್ವಾಮಿ ಇದೀಗ ಮತ್ತೊಮ್ಮೆ ಅದೇ ಶಬ್ದಗಳ ಪ್ರಯೋಗ ಮಾಡಿರುವುದು ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಭಂದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

 


 

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2020-21ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿರುವ ಸಚಿವ ಮಾಧುಸ್ವಾಮಿಯವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ‘ಜಾಡ್ಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತೀಯಾ ಗೊತ್ತಾ? ಕೆಲಸ ಮಾಡದೆ ಹೆಂಡ್ತಿಗೆ ಸೀರೆ ತೆಗೆದುಕೊಳ್ಳೋಕೆ ಹೋಗಿದ್ಯಾ? ಮೊದಲು ಇವನನ್ನು ಕೆಲಸದಿಂದ ವಜಾ ಮಾಡಿ’ ಎಂದು ಗುಬ್ಬಿ ಎಇಇ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

” ನೀನು ಕೆಲಸ ಮಾಡದಿದ್ದರೂ ನಿನ್ನ ರಕ್ಷಣೆಗೆ ನಿಲ್ಲುವ ಸೀರೆ ಸುತ್ತುವ ಆ ಕೃಷ್ಣ ಯಾರು? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ, ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳುತ್ತೀಯಾ ಗೊತ್ತಾ ನೀನೀಗಾ…? ರಾಸ್ಕಲ್ ಕತ್ತೆ ಕಾಯೋಕೆ ಇಲ್ಲಿಗೆ ಬಂದಿದ್ದೀಯಾ? ಏನ್ ತಿಳ್ಕೊಂಡಿದ್ದೀರಾ ನಾವು…? ರೆಸಲ್ಯೂಷನ್ ಮಾಡ್ಸಿ ಸಸ್ಪೆಂಡ್ ಮಾಡ್ಸಿ ಈ ನನ್ಮಕ್ಕಳನ್ನ” ಎಂದು ಕೂಗಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top