fbpx
ಸಮಾಚಾರ

ಭಾರತ v/s ಆಸ್ಟ್ರೇಲಿಯಾ 3ನೇ ಟೆಸ್ಟ್: ರಾಷ್ಟ್ರಗೀತೆ ವೇಳೆ ಬಾವುಕನಾಗಿ ಕಣ್ಣೀರಿಟ್ಟ ಸಿರಾಜ್

ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವ ವೇಳೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಬಾವುಕರಾಗಿ ಕಣ್ಣೀರಿಟ್ಟಿದ್ದಾರೆ.

 

 

ತಮ್ಮ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದ ಸಿರಾಜ್, ರಾಷ್ಟ್ರಗೀತೆ ವೇಳೆಯಲ್ಲಿ ಅತ್ಯಂತ ಭಾವುಕರಾಗಿ ಕಂಡುಬಂದಿದ್ದರಲ್ಲದೆ ಆನಂದ ಭಾಷ್ಪವನ್ನು ಸುರಿಸಿದರು. ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಳಿಕ ಅತಿ ಮುಖ್ಯವಾದ ಡೇವಿಡ್ ವಾರ್ನರ್ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮೊದಲ ಬ್ರೇಕ್ ನೀಡಿದರು.

 

 

ಪಿತೃವಿಯೋಗದ ದುಃಖದಲ್ಲಿರುವ ಭಾರತ ತಂಡದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ರಾಷ್ಟ್ರೀಯ ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ಟೀಮ್ ಇಂಡಿಯಾ ಜೊತೆಗೆ ಆಸ್ಟ್ರೇಲಿಯಾದಲ್ಲೇ ಉಳಿದುಕೊಳ್ಳಲು ನಿರ್ಧರಿಸಿದ್ದರು. ಅಲ್ಲದೆ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಡೆಬ್ಯು ಮಾಡಿದ್ದರಲ್ಲದೆ ಪಂದ್ಯದಲ್ಲಿ ಒಟ್ಟು ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಗಮನ ಸೆಳೆದಿದ್ದರು. ಈ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಸಿರಾಜ್ ಭಾರತದ ಪರ ಆಡುವುದು ಅಪ್ಪ ಮೊಹಮ್ಮದ್ ಗೌಸ್ ಅವರ ಬಹುದೊಡ್ಡ ಕನಸಾಗಿತ್ತು. ಈಗ ಅಪ್ಪನ ಕನಸನ್ನು ನನಸು ಮಾಡಿರುವ ಸಿರಾಜ್, ಟೀಮ್ ಇಂಡಿಯಾ ಪರ ಆಡುವ ಮೂಲಕ ಗಮನ ಸೆಳೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top