fbpx
ಸಮಾಚಾರ

ಜೈಲು ವಾಸದಲ್ಲಿರುವ ರಾಗಿಣಿಗೆ ಮತ್ತೊಂದು ಬ್ಯಾಡ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿಗೆ ಜಾಮೀನು ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ರಾಗಿಣಿ ಪ್ರಕರಣದಲ್ಲಿ ವಿಚಾರಣೆಯನ್ನು ಮುಂದಿನ ವಾರಕ್ಜೆ ಮುಂದೂಡಲಾಗಿದೆ. ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

ಹೈಕೋರ್ಟ್ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲ ಶಾಹಿಲ್ ಭಾಲೈಕ್, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠಕ್ಕೆ ಈ ಕೇಸ್ ವರ್ಗಾವಣೆ ಆಗಿದ್ದು, ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಮಾದಕ ದ್ರವ್ಯ ಪೂರೈಕೆ ಜಾಲದೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಸೆ.4ರಂದು ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಹೈಕೋರ್ಟಿನಲ್ಲಿ ಜಾಮೀನು ಸಿಗದೆ ಸುಪ್ರೀಂ ಕೋರ್ಟಿಗೆ ಮೊರೆ ಹೋಗಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾ.ಎಲ್‌.ನಾಗೇಶ್ವರ ರಾವ್‌ ಅವರ ನೇತೃತ್ವದ ತ್ರಿಸದಸ್ಯ ಪೀಠ ಸಿಸಿಬಿ ಪೊಲೀಸರಿಗೆ ಪ್ರಕರಣಕ್ಕೆ ಸಂಬಂಧಿಸಿ ವರದಿ ನೀಡುವಂತೆ ನೋಟಿಸ್‌ ಸಲ್ಲಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top