fbpx
ಸಮಾಚಾರ

ಟೀಮ್ ಇಂಡಿಯಾಗೆ ಶಾಕ್: ರಿಷಬ್ ಪಂತ್ ಆಸ್ಪತ್ರೆಗೆ ರವಾನೆ!

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು, ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ರಿಷಬ್ ಪಂತ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಪಾಟ್ ಕಮಿನ್ಸ್ ಬೌಲಿಂಗ್ ನಲ್ಲಿ ಚೆಂಡು ರಿಷಬ್ ಪಂತ್ ಅವರ ಮೊಣಕೈಗೆ ರಭಸವಾಗಿ ಬಡಿದಿತ್ತು. ಆ ವೇಳೆ ತಂಡದ ಫಿಸಿಯೋ ಅಂಗಳಕ್ಕೆ ಬಂದು ಪ್ರಥಮ ಚಿಕಿತ್ಸೆ ನೀಡಿದ್ದರು. ಆನಂತರ ಪಂತ್ ಬ್ಯಾಟಿಂಗ್ ಮುಂದುವರೆಸಿದ್ದರು.

ಪಂತ್ ಔಟ್ ಆದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಕ್ಯಾನಿಂಗ್ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದ್ದು, ರಿಷಬ್ ಪಂತ್ ಅವರ ಎಡ ಮೊಣಕೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಕ್ಯಾನಿಂಗ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಟ್ವೀಟ್ ಮಾಡಿದೆ.

ಇನ್ನು ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಪಂತ್ ಗೆ ಗಾಯವಾಗಿರುವ ಕಾರಣ ವೃದ್ಧಿಮಾನ್ ಸಹಾ ಗ್ಲೌಸ್ ತೊಟ್ಟು ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top