fbpx
ಸಮಾಚಾರ

ಚೊಚ್ಚಲ ಮಗುವಿಗೆ ಜನ್ಮ ನೀಡಿದ ಅನುಷ್ಕಾ ಶರ್ಮಾ: ಅಪ್ಪ ಆದ್ರು ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಸೋಮವಾರ (ಜನವರಿ 11) ಹೆಣ್ಣು ಮಗುವಿಗೆ ಅಪ್ಪ ಆಗಿದ್ದಾರೆ. ಹೌದು, ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಅವರು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ..

 

 

ಈ ಕುರಿತು ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ ಅವರು “ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂಬ ವಿಚಾರವನ್ನು ತಮ್ಮರ ಜೊತೆ ಹಂಚಿಕೊಳ್ಳಲು ಬಹಳ ಸಂತೋಷವಾಗುತ್ತಿದೆ. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲರಿಗೂ ನಾವು ಅಭಾರಿಯಾಗಿದ್ದೇವೆ. ಸದ್ಯ ಮಗು ಮತ್ತು ಅನುಷ್ಕಾ ಇಬ್ಬರೂ ಆರೋಗ್ಯದಿಂದ ಇದ್ದಾರೆ. ನಿಮ್ಮೆಲ್ಲಾ ಪ್ರಾರ್ಥನೆ ಮತ್ತು ಹಾರೈಕೆಗಳಿಗೆ ಧನ್ಯವಾದಗಳು. ಮತ್ತು ಈ ಸಮಯದಲ್ಲಿ ನೀವು ನಮ್ಮ ಗೌಪ್ಯತೆಯನ್ನು ಗೌರವಿಸಬಹುದು ಎಂದು ನಾವು ಭಾವಿಸುತ್ತೇವೆ” ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

 

 

2017ರ ಡಿಸೆಂಬರ್‌ನಂದು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿತ್ತು. ಕೆಲ ತಿಂಗಳುಗಳ ಹಿಂದೆಯಷ್ಟೇ ತಾವು ಪೋಷಕರಾಗುತ್ತಿರುವ ವಿಚಾರವನ್ನು ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಷ್ಟೇ ಅಲ್ಲ ಜನವರಿ ತಿಂಗಳಲ್ಲಿ ಮನೆಗೆ ಹೊಸ ಸದಸ್ಯನ ಆಗಮನವಾಗಲಿದೆ ಎಂದು ಅವರು ಅಧಿಕೃತಗೊಳಿಸಿದ್ದರು.

ಅಂದಹಾಗೆ ಮೊದಲ ಮಗುವಿಗೆ ಅಪ್ಪನಾಗುವ ಖುಷಿಯಲ್ಲಿರುವ ವಿರಾಟ್ ಕೊಹ್ಲಿ, ಈಗಾಗಲೇ ಆಸ್ಟ್ರೇಲಿಯಾದಿಂದ ಭಾರತಕ್ಕೆ ವಾಪಸ್ ಬಂದಾಗಿದೆ. ಆಸ್ಟ್ರೇಲಿಯಾ-ಭಾರತ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ಭಾಗವಹಿಸಿದ ಬಳಿಕ ಕೊಹ್ಲಿ ಪಿತೃತ್ವ ರಜೆ ಪಡೆದುಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top