fbpx
ಸಮಾಚಾರ

ಅಂಬಾನಿ ವಿರುದ್ಧ ಗಂಭೀರ ಆರೋಪ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್: ಏನದು?

ದರ್ಶನ್‌ ಅಭಿನಯದ ಬಹು ನಿರೀಕ್ಷಿತ ‘ರಾಬರ್ಟ್‌’ ಸಿನಿಮಾ ಮಾಚ್‌ರ್‍ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.ಫೇಸ್‌ಬುಕ್‌ ಲೈವ್‌ನಲ್ಲಿ ಈ ವಿಚಾರ ಸ್ಪಷ್ಟಪಡಿಸಿದ ದರ್ಶನ್‌, ರಾಬರ್ಟ್‌ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್‌ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ಲೈವ್‌ನಲ್ಲಿ ರಿಲೀಸ್ ಡೇಟ್ ಘೋಷಣೆ ಮಾಡಿದ ದರ್ಶನ್ ಅವರು ಇದೆ ವೇಳೆ ಅಂಬಾನಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ.

 

 

ಅಂಬಾನಿ ಅವರು 5ಜಿ ಆರಂಭಿಸಿದ್ದಾರೆ. ಅದಕ್ಕಾಗಿಯೇ ದೊಡ್ಡವರನ್ನು ಕೂರಿಸಿ ಚಿತ್ರಮಂದಿರ ತೆರೆಯದಂತೆ ಹೇಳುತ್ತಿದ್ದಾರೆ ಎಂದು ನಟ ದರ್ಶನ್‌ ಆಕ್ರೋಶ ಹೊರಹಾಕಿದ್ದಾರೆ. ‘ಅಂಬಾನಿ 5ಜಿ ನೆಟ್‌ವರ್ಕ್ ಲಾಂಚ್‌ ಮಾಡುತ್ತಿದ್ದಾರೆ. ಅವರ 5ಜಿ ನೆಟ್‌ವರ್ಕ್ ಚಾಲ್ತಿಯಲ್ಲಿರಬೇಕು ಎಂದರೆ ಎಲ್ಲರೂ ಮೊಬೈಲ್‌ಗೆ ಅಡಿಕ್ಟ್ ಆಗಬೇಕು. 5ಜಿ ಓಡಬೇಕು ಎಂದರೆ ಓಟಿಟಿಯಲ್ಲಿ ಸಿನಿಮಾಗಳು ಇರಬೇಕು. ಆಗಲೇ ಅವರಿಗೆ ದುಡ್ಡು. ಅದೇ ಚಿತ್ರಮಂದಿರಗಳು ತೆರೆದುಬಿಟ್ಟರೆ ಓಟಿಟಿಗಳ ಮಾರುಕಟ್ಟೆಕುಸಿಯುತ್ತದೆ. ಹಾಗಾಗಿ ಅಂಬಾನಿ ದೊಡ್ಡವರಿಗೆ ಹೇಳಿ ಚಿತ್ರಮಂದಿರಗಳಿಗೆ ಅವಕಾಶ ನಿರಾಕರಿಸುತ್ತಿರಬಹುದು.. ”

‘ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ನೀಡದೆ ಇರುವುದರ ಹಿಂದೆ ಅಂಬಾನಿಯ 5ಜಿ ಸ್ಕಾ್ಯಮ್‌ ಇದೆ ಎಂಬುದು ನನ್ನ ವೈಯುಕ್ತಿಕ ಅಭಿಪ್ರಾಯ. ಯಾಕೆಂದರೆ ಮಾಲ್‌ಗಳು, ಮಾರುಕಟ್ಟೆ, ಅಂಗಡಿ, ಕಲ್ಯಾಣ ಮಂಟಪಗಳು, ಶಾಲಾ-ಕಾಲೇಜುಗಳು ತೆರೆದಿವೆ. ಎಲ್ಲ ಕಡೆ ಜನ ಸೇರುತ್ತಿದ್ದಾರೆ. ಆದರೆ, ಚಿತ್ರಮಂದಿರಗಳಲ್ಲಿ ಮಾತ್ರ ಶೇ.100ರಷ್ಟುಸೀಟು ಭರ್ತಿಗೆ ಅವಕಾಶ ನೀಡುತ್ತಿಲ್ಲ. ಇದಕ್ಕೆಲ್ಲ ಕಾರಣ, 5ಜಿ! ಅಂಬಾನಿ ಅವರು 5ಜಿ ಸ್ಟಾರ್ಟ್ ಮಾಡಿದ್ದಾರೆ. ಅವರಿಗೆ ಮೊಬೈಲ್ ಯೂಸ್ ಆದರೆ, 5ಜಿ ಓಡೋದು. ಅದಕ್ಕೋಸ್ಕರ ಪಾಪ, ದೊಡ್ಡ ದೊಡ್ಡವರಿಗೆ ಹೇಳಿ ಹೀಗೆ ಮಾಡಿಸಿರಬಹುದು.’ ಎಂದು ದರ್ಶನ್ ಹೇಳಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಒಟಿಟಿ ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ. ಶೇ 25ರಷ್ಟು ಪ್ರೇಕ್ಷಕರ ಮಿತಿ ಹೇರಿದರೂ ಸರಿ. ನಾವು ಚಿತ್ರಮಂದಿರದಲ್ಲೇ ಹೊಸ ಸಿನಿಮಾ ಬಿಡುಗಡೆ ಮಾಡುತ್ತೇವೆ’ ಎಂದು ದರ್ಶನ್ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top