fbpx
ಸಮಾಚಾರ

“ರಾಧಿಕಾ ಯಾರು ನನಗೆ ಗೊತ್ತಿಲ್ಲ” ರಾಧಿಕಾ ಬಗ್ಗೆ ಕೊನೆಗೂ ಮೌನ ಮುರಿದ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

“ಅವರ್ಯಾರು ಗೊತ್ತಿಲ್ಲ, ಗೊತ್ತಿಲ್ಲದವರ ಬಗ್ಗೆ ನಾನು ಯಾಕೆ ಪ್ರತಿಕ್ರಿಯೆ ಕೊಡಬೇಕು” ಇದು ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಉತ್ತರವಾಗಿದೆ.

ಸಿನಿಮಾ ವಿಚಾರವಾಗಿಯಲ್ಲದೇ, ಬೇರೆ ಯಾವ ಕಾರಣಕ್ಕೂ ಎಲ್ಲಿಯೂ ಕಾಣಿಸಿಕೊಳ್ಳದ ಸ್ಯಾಂಡಲ್‌ವುಡ್‌ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಇದೀಗ ವಂಚಕ ಯುವರಾಜನ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಕೆಲವು ದಿನಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಎಚ್‌ಡಿ ಕುಮಾರಸ್ವಾಮಿ ಮೌನ ಮುರಿದಿದ್ದಾರೆ.

ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿದ್ದಾರೆ. ಅದರ ಬಗ್ಗೆ ಏನ್ ಹೇಳ್ತೀರಿ ಎಂದು ಮಾಧ್ಯಮದವರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರವಾಗಿ ಕುಮಾರಸ್ವಾಮಿ ಅವರು, “ಅವರ್ಯಾರು ಎಂದೇ ನನಗೆ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ? ಗೊತ್ತಿಲ್ಲದ ಕುಟುಂಬದವರ ಬಗ್ಗೆ ನನಗೆ ಕೇಳಬೇಡಿ” ಎಂಬುದಾಗಿ ಪ್ರತಿಕ್ರಿಯಿಸಿ, ಏನೊಂದು ವಿಷಯ ತಿಳಿಸಲು ನಿರಾಕರಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಪತ್ರಕರ್ತರು ಪ್ರಶ್ನಿಸಿದಾಗ ರಾಧಿಕಾ ಕುಮಾರಸ್ವಾಮಿ ಅವರ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top