fbpx
ಸಮಾಚಾರ

ಸಿಗದ ಸಚಿವ ಸ್ಥಾನ: ಕಣ್ಣೀರು ಹಾಕಿದ ಶಾಸಕ ರೇಣುಕಾಚಾರ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 7-8 ಜನ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ನೂತನ ಸಚಿವರ ಸಂಭಾವ್ಯ ಪಟ್ಟಿ ಹರಿದಾಡುತ್ತಿದ್ದು, ಅದರಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೆಸರಿಲ್ಲದಿರುವುದು ಅವರಿಗೆ ಬೇಸರ ತರಿಸಿದೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ನಾನು ಯಾವುದೇ ಲಾಬಿ ಮಾಡಲಿಲ್ಲ.‌ ಅದು ನನ್ನ ಸ್ವಯಂಕೃತ ಅಪರಾಧ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ’ ಎಂದರು.

‘ಇದು ಬೆಂಗಳೂರು -ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು.’ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದರು.

“ನಾನು ಅಸಮರ್ಥ ಇರಬಹುದು. ನನಗೆ ಕ್ವಾಲಿಫಿಕೇಷನ್ ಇಲ್ಲದಿರಬಹುದು, ಮಂತ್ರಿ ಆಗೋಕೆ ಕ್ವಾಲಿಫಿಕೇಷನ್ ಬೇಕು, ಆ ಅರ್ಹತೆ ನನಗಿಲ್ಲ ಅನ್ನಿಸುತ್ತೆ. ನನಗೆ ಬೇಸರವಾಗಿದೆ, ಆದರೆ ಯಾರ ಬಳಿ ಹೇಳಲಿ?” ಅಂತ ರೇಣುಕಾಚಾರ್ಯ ಗದ್ಗದಿತರಾಗಿ ಮಾತಾಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top