fbpx
ಸಮಾಚಾರ

ಜೈಲುವಾಸದಲ್ಲಿದ್ದ ನಟಿ ರಾಗಿಣಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್: ತುಪ್ಪದ ಹುಡುಗಿಗೆ ಸಂತಸದ ಸುದ್ದಿ

ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. ರಾಗಿಣಿ ದ್ವಿವೇದಿಗೆ 140 ದಿನಗಳ ಬಳಿಕ ಜಾಮೀನು ಸಿಕ್ಕಿದ್ದು ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ರೊಹಿಂಟನ್ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.

ರಾಗಿಣಿ ಕಳೆದ 140 ದಿನಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳಿಲ್ಲ. ರಾಗಿಣಿ ಮನೆಯಲ್ಲಿ ಯಾವುದೇ ಡ್ರಗ್ ವಶಪಡಿಸಿಕೊಂಡಿಲ್ಲ ಮತ್ತು ಸೇವಿಸಿಲ್ಲ. ಕೇವಲ ಆರೋಪಿ ರವಿಶಂಕರ್ ಹೇಳಿಕೆಯನ್ನಾಧರಿಸಿ ರಾಗಿಣಿಯವರನ್ನ ಬಂಧಿಸಲಾಗಿದೆ. ಈಗಾಗಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ಜಾಮೀನು ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು. ಇಷ್ಟು ತಿಂಗಳು ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿದ್ದರು. ಇದೇ ಪ್ರಕರಣದಲ್ಲಿ ಬಂಧಿಯಾಗಿದ್ದ ಮತ್ತೊಬ್ಬ ನಟಿ ಸಂಜನಾ ಗಲ್ರಾಣಿಗೆ ಕಳೆದ ಡಿಸೆಂಬರ್ 11ರಂದು ಜಾಮೀನು ಸಿಕ್ಕಿತ್ತು.

ಅಂದಹಾಗೆ ಅನೇಕ ಸೆಲೆಬ್ರಿಟಿಗಳಿಗೆ ಮತ್ತು ಪ್ರಮುಖ ವ್ಯಕ್ತಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದವರೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಸೆಪ್ಟೆಂಬರ್ 4ರಂದು ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ಯಲಹಂಕದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ಬಂಧಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top