fbpx
ಸಮಾಚಾರ

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ರೌಡಿಸಂ; ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ- ವಿಡಿಯೋ ವೈರಲ್

ಕೃಷಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಶಾಸಕಿ ಸೌಮ್ಯ ರೆಡ್ಡಿ ಪೊಲೀಸರ ಮೇಲೆ ದರ್ಪ ಪ್ರದರ್ಶನ ಮಾಡಿದ್ದಾರೆ. ರಾಜಭವನ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವೇಳೆ ಮಹಿಳಾ ಪೊಲೀಸ್ ಪೇದೆಯ ಮೇಲೆ ಸೌಮ್ಯ ರೆಡ್ಡಿ ಹಲ್ಲೆ ನಡೆಸಿದ್ದಾರೆ.

 

 

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಕಾಂಗ್ರೆಸ್ ನಾಯಕರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಸ್ಥಳದಲ್ಲಿದ್ದ ಸೌಮ್ಯಾ ರೆಡ್ಡಿಯವರನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದಾಗ, ಸೌಮ್ಯಾ ರೆಡ್ಡಿ ಮಹಿಳಾ ಪೇದೆಯೊಬ್ಬರಿಗೆ ‘ಹೂ ದಿ ಹೆಲ್ ಆರ್ ಯು’ ಎಂದು ನಿಂದಿಸುತ್ತಾ ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಈ ದೃಶ್ಯ ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ವೈರಲ್ ಆಗಿದ್ದರಿಂದ ಸೌಮ್ಯಾ ರೆಡ್ಡಿಯವರು ಸಾರ್ವಜನಿಕರ ಟೀಕೆಗೂ ಗುರಿಯಾದರು. ಆದರೆ, ಸೌಮ್ಯಾ ರೆಡ್ಡಿ ಈ ಘಟನೆ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು, ತಮ್ಮ ಮೇಲೆ ಮಹಿಳಾ ಪೇದೆಯೇ ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top