ಸದಾ ವಿವಾದಿತ ಹೇಳಿಕೆಗಳ ಮೂಲಕ ಮಾತ್ರ ಚರ್ಚೆಗೆ ಗ್ರಾಸವಾಗುವ ಸಂಸದ ಅನಂತಕುಮಾರ್ ಹೆಗಡೆ ಕ್ಷೇತ್ರದ ಸಿದ್ದಾಪುರ ತಾಲೂಕಿನ ಕಾವಂಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸರಿಮನೆ ಹೊಳೆಗೆ ಸೇತುವೆ ಅಂತೂ ನಿರ್ಮಾಣಗೊಂಡಿದೆ. ಆದರೆ, ಅದು ಹೆಗಡೆ ಶ್ರಮದಿಂದಲ್ಲ! ಅನಂತಕುಮಾರ್ ಹೆಗೆಡೆ ಕೈಯಿಂದ ಆಗದ ಕೆಲಸವನ್ನು ರಾಜ್ಯಸಭಾ ಸದ್ಯಸ್ಯ ಜಿಸಿ ಚಂದ್ರಶೇಖರ್ ಅವರು ಮಾಡಿ ತೋರಿಸಿದ್ದಾರೆ.
ಬಸರಿಮನೆ ಗ್ರಾಮದಲ್ಲಿ ಸುಮಾರು 100 ಕ್ಕೂ ಹೆಚ್ಚು ಮನೆಗಳಿವೆ. ಈ ಊರಿನ ಮಕ್ಕಳು ಶಾಲೆಗೆ ಹೋಗಬೇಕು ಅಂದ್ರೆ ನಾಲ್ಕು ಕಿ.ಮೀ. ನಡೆದು ಹೋಗಬೇಕು. ಈ ಮಾರ್ಗದಲ್ಲಿ ಬಸರಿಮನೆ ಹೊಳೆ ಸಾಗುತ್ತದೆ. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ಅಡಿಕೆ ಹಾಗೂ ಮರದ ಹಲಗೆಯಲ್ಲಿ ನಿರ್ಮಿಸಿದ ಕಾಲು ಸಂಕವೇ ಶಾಲೆಗೆ ಹೋಗುವ ಮಕ್ಕಳಿಗೆ ಜೀವರಕ್ಷಕ.
ಮಳೆಗಾಲದಲ್ಲಿ ಈ ಮಕ್ಕಳು ಜೀವ ಕೈಯಲ್ಲಿ ಹಿಡಿದು ಸಾಗಬೇಕು. ಹೀಗಾಗಿ ಇಲ್ಲಿನ ಶಾಸಕರು, ಸದ್ಯ ರಾಜ್ಯದ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹಾಗೂ ಸಂಸದ ಅನಂತಕುಮಾರ್ ಹೆಗಡೆಗೆ ಸೇತುವೆ ನಿರ್ಮಿಸುವಂತೆ ಮನವಿ ಮಾಡಿದ್ದರು. ಆದರೆ ಈ ಇಬ್ಬರೂ ಈಕಡೆ ಗಮನ ನೀಡಿರಲಿಲ್ಲ.
ಈ ಹಿನ್ನೆಲೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ರಾಜ್ಯಸಭಾ ಸದಸ್ಯ ಜಿ. ಸಿ. ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಚಂದ್ರಶೇಖರ್, ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂ. ಮಂಜೂರು ಮಾಡಿ, ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು.
ಉತ್ತರ ಕನ್ನಡ ಜಿಲ್ಲೆಯ ಈ ಪುಟ್ಟ ಮಕ್ಕಳ ಪರಿಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿ ಶಾಶ್ವತ ಕಾಲುಸೇತುವೆ ನಿರ್ಮಾಣಕ್ಕಾಗಿ ಅಂದು ಪಣತೊಟ್ಟಿದ್ದ ಕಾರ್ಯ ಇಂದು ಪೂರ್ಣಗೊಂಡಿದೆ.
Posted by GC Chandrashekhar on Wednesday, 20 January 2021
ಸದ್ಯ ಈಗ ಕಾಲು ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಆದಷ್ಟು ಬೇಗ ಸಾರ್ವಜನಿಕರ ಬಳಕೆಗೆ ಸಿಗಲಿದೆ. ಕಾಲು ಸೇತುವೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವ ಬಗ್ಗೆ ಸ್ವತಃ ಸಂಸದ ಜಿಸಿ ಚಂದ್ರಶೇಖರ್ ಅವ್ರೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿತ್ತು ಸಾರ್ಥಕ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.
“ಉತ್ತರ ಕನ್ನಡ ಜಿಲ್ಲೆಯ ಈ ಪುಟ್ಟ ಮಕ್ಕಳ ಪರಿಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿ ಶಾಶ್ವತ ಕಾಲುಸೇತುವೆ ನಿರ್ಮಾಣಕ್ಕಾಗಿ ಅಂದು ಪಣತೊಟ್ಟಿದ್ದ ಕಾರ್ಯ ಇಂದು ಪೂರ್ಣಗೊಂಡಿದೆ.” ಎಂದು ಸಂಸದ ಜಿಸಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ. ಕೊಟ್ಟ ಮಾತಿನಂತೆ ಶಾಲಾ ಮಕ್ಕಳ ಸಂಕಷ್ಟಕ್ಕೆ ಮಿಡಿದು ಸೇತುವೆ ನಿರ್ಮಾಣ ಮಾಡಿಸಿಕೊಟ್ಟಿದ್ದಕ್ಕೆ ಆ ಭಾಗದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಈ ಪುಟ್ಟ ಮಕ್ಕಳ ಪರಿಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿ ಶಾಶ್ವತ ಕಾಲುಸೇತುವೆ ನಿರ್ಮಾಣಕ್ಕಾಗಿ ಅಂದು ಪಣತೊಟ್ಟಿದ್ದ ಕಾರ್ಯ ಇಂದು ಪೂರ್ಣಗೊಂಡಿದೆ. pic.twitter.com/avxW5V8mw6
— GC ChandraShekhar (@GCC_MP) January 20, 2021
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
