fbpx
ಸಮಾಚಾರ

ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು: ಅವಹೇಳನಕಾರಿ ಬರಹವೂ ಪತ್ತೆ

ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ.

ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಕಾಣಿಕೆ ಡಬ್ಬಿ ತೆರೆದು ಹಣ ಎಣಿಸಲು ಮುಂದಾದಾಗ ಅದರೊಳಗೆ ಕಾಂಡೋಮ್‌ಗಳು ಮತ್ತು ಪ್ರಚೋದನಾಕಾರಿ ಬರಹಗಳ ಪತ್ರ ಲಭಿಸಿದೆ. ಎಂ. ರುದ್ರೇಶ್‌ ಎಂಬವರಿಗೆ ಶುಭಕೋರಿದ ಈ ಪತ್ರದಲ್ಲಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರವಿರುವ ಭಿತ್ತಿಪತ್ರವನ್ನು ವಿಕೃತಿಗೊಳಿಸಿದ್ದಾರೆ.

“ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು, ದೇವ ಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿದೂತರುಗಳು ಸೇಡಿನ ಸ್ವಭಾವ ಹೊಂದಿದ್ದು, ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ, ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿದೆ. ಎಚ್ಚರ, ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ-ಬಾಚಿ ತಿಂದು, ತೇಗುವ ಈ ಅಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹಿಡಿದು ಕೊಲ್ಲಬೇಕಾಗಿದೆ. ಜನರು ಸಿದ್ದರಾಗಬೇಕು’ ಎಂದು ಪ್ಲೆಕ್ಸ್‌ನಲ್ಲಿ ಬರೆಯಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top