fbpx
ಸಮಾಚಾರ

“ಸತ್ಯಕ್ಕೆ ಜಯ, ಸತ್ಯಮೇವ ಜಯತೆ” ಜೈಲಿನಿಂದ ಹೊರಬಂದ ನಟಿ ರಾಗಿಣಿ ಹೇಳಿದ್ದೇನು ಗೊತ್ತಾ?

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದ ಜೈಲಿನಿಂದ ಹೊರ ಬಂದಿದ್ದಾರೆ. ಜಾಮೀನು ಸಿಕ್ಕು ನಾಲ್ಕು ದಿನಗಳ ಬಳಿಕ ಇಂದು ರಿಲೀಸ್ ಆಗಿದ್ದಾರೆ. ಕೆಲವು ದಿನಗಳ ಹಿಂದೆಯೇ ರಾಗಿಣಿಗೆ ಸುಪ್ರೀಂ ಕೋರ್ಟ್​ನಲ್ಲಿ ಜಾಮೀನು ಮಂಜೂರು ಆಗಿದ್ದರೂ ಕಾರಣಾಂತರಗಳಿಂದ ಅವರ ಬಿಡುಗಡೆ ವಿಳಂಬವಾಗಿತ್ತು. ಸೋಮವಾರ ರಾತ್ರಿ ರಾಗಿಣಿ ಜೈಲಿನಿಂದ ಹೊರಬಂದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ನಿಜವಾಗಿ ಸತ್ಯಕ್ಕೆ ಜಯವಾಗಿದೆ, ಸತ್ಯಮೇವ ಜಯತೇ ಎಂದಿದ್ದಾರೆ. ಜೈಲಿನಿಂದ ಹೊರಬಂದು ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಇಷ್ಟು ದಿನ ನನ್ನ ಪರ ನಿಂತಿದ್ದ ಬಂಧುಗಳಿಗೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತಿದ್ದೇನೆ. ನಾನು ನ್ಯಾಯಾಲಯದ ಮೇಲೆ ತುಂಬಾ ನಂಬಿಕೆ ಇಟ್ಟಿದ್ದೆ. ಹಾಗಾಗಿ ನನಗೆ ಸಿಕ್ಕ ಜಯವಿದು.”

ನಾನು ತುಂಬಾ ಹೋರಾಟಗಳನ್ನು ನಡೆಸಿ ಜೈಲಿನಿಂದ ಹೊರಗಡೆ ಬಂದಿದ್ದೇನೆ. ಈ ಸಮಯದಲ್ಲಿ ನನ್ನೊಂದಿಗೆ ನಿಂತ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಇಡೀ ಕರ್ನಾಟಕದ ಜನತೆಯ ಮುಂದೆ ಹೇಳುತ್ತಿದ್ದೇನೆ. ಸತ್ಯವನ್ನು ಯಾರೂ ಕೂಡ ಮುಚ್ಚಿಡಲು ಸಾಧ್ಯವಿಲ್ಲ ಎಂದು ಸಾಬೀತಾಗಿದೆ. ಇನ್ನೂ ಕೆಲದಿನಗಳ ನಂತರ ಮಾಧ್ಯಮಗಳೊಂದಿಗೆ ಹಲವು ವಿಷಯಗಳನ್ನು ಹಂಚಿಕೊಳ್ಳಲು ಇದೆ ಎಂದು ತಿಳಿಸಿದರು.

ಏನಿದು ಪ್ರಕರಣ?:
ಡ್ರಗ್ಸ್‌ ಜಾಲ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಸೆ.4 ರಂದು ರಾಗಿಣಿ ಮತ್ತು ಸೆ.8ರಂದು ಸಂಜನಾರನ್ನು ಬಂಧಿಸಿದ್ದರು. ಪೊಲೀಸ್‌ ಕಸ್ಟಡಿ ಮುಗಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ, ಸೆ.28ರಂದು ಜಾಮೀನು ಅರ್ಜಿ ವಜಾಗೊಳಿಸಿತ್ತು.

ಇದರಿಂದ, ರಾಗಿಣಿ ಮತ್ತು ಸಂಜನಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅರ್ಜಿದಾರರ ವಿರುದ್ಧ ಡ್ರಗ್ಸ್‌ ಪೂರೈಕೆ, ಮಾರಾಟ ಹಾಗೂ ಸೇವನೆಯಂಥಹ ಗಂಭೀರ ಆರೋಪಗಳಿದ್ದು, ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top