fbpx
ಸಮಾಚಾರ

RBI ನೇಮಕಾತಿ 2021: 10ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 12, 2021 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ:
10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:
ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ ಅಭ್ಯರ್ಥಿಗಳು ಆನ್‌ಲೈನ್​ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಫೆಬ್ರವರಿ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top