fbpx
ಸಮಾಚಾರ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಸ್ವಸ್ಥ: ದಿಢೀರ್ ಆಸ್ಪತ್ರೆಗೆ ದಾಖಲು

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬ ಸದಸ್ಯರು ನೀಡಿರುವ ಮಾಹಿತಿಯ ಪ್ರಕಾರ ಬುಧವಾರ ಜ.27 ರಂದು ಬೆಳಿಗ್ಗೆ ಸೌರವ್ ಗಂಗೂಲಿ ಅವರಿಗೆ ಸಣ್ಣ ಪ್ರಮಾಣದ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿದೆ.

ಕಳೆದ ತಿಂಗಳು ಲಘು ಹೃದಯಾಘಾತ ಎದುರಿಸಿದ್ದ ಸೌರವ್ ಗಂಗೂಲಿ ವುಡ್ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದರು. ವೈದ್ಯರು ಉಳಿದ ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮತ್ತೊಮ್ಮೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top