fbpx
ಸಮಾಚಾರ

“ಮುಂಬಯಿ ಕರ್ನಾಟಕಕ್ಕೆ ಸೇರಿದ್ದು, ನಾವು ಮುಂಬೈ ಪಡೆದೇ ತೀರುತ್ತೇವೆ” ಡಿಸಿಎಂ ಲಕ್ಷ್ಮಣ್​ ಸವದಿ ಘರ್ಜನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ, ಕರ್ನಾಟಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಕ್ತ ತಿರುಗೇಟು ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗಡಿ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿರುವ ವ್ಯಾಜ್ಯದ ತೀರ್ಪು ನಮ್ಮ ಪರವಾಗಿಯೇ ಬರುತ್ತದೆ ಎಂಬ ವಿಶ್ವಾಸವಿದೆ. ಈ ಭಾಗದ ನಾವು ಮೊದಲಿನಿಂದಲೂ ಮುಂಬೈ ಕರ್ನಾಟಕದಲ್ಲಿ ಇದ್ದವರು. ಹೀಗಾಗಿ, ಮುಂಬೈ ಮೇಲೆ ನಮಗೂ ಹಕ್ಕಿದ್ದು, ಮುಂಬೈ ನಮಗೆ ಬೇಕು ಎಂದು ಈಗಿನಿಂದಲೇ ಬೇಡಿಕೆ ಇಡಲು ಶುರು ಮಾಡುತ್ತೇವೆ..”

“ಆದ್ದರಿಂದ, ಮುಂಬೈನ ಕರ್ನಾಟಕಕ್ಕೆ ಸೇರಿಸಬೇಕೆಂದು ಈಗಿನಿಂದಲೇ ಬೇಡಿಕೆ ಇಡುತ್ತೇವೆ. ಅಲ್ಲಿವರೆಗೆ ಅದನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎನ್ನುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿಗೆ ತಿರುಗೇಟು ನೀಡಿದರು.

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದ ಕುರಿತಂತೆ ಸಿಎಂ ಉದ್ಧವ್ ಠಾಕ್ರೆ ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು. ಇಲ್ಲಿಯವರೆಗೂ ಏನೆಲ್ಲ ಆಗಿದೆಯೋ ಅದರ ಬಗ್ಗೆ ಯೋಜಿಸುವುದು ಬೇಡ. ಆದರೆ ಇಂದಿನಿಂದ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ದಿಷ್ಠ ಸಮಯದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top