fbpx
ಸಮಾಚಾರ

ಮೊದಲ ಬಾರಿಗೆ ಮುದ್ದು ಮಗಳ ಫೋಟೋ ಹಂಚಿಕೊಂಡ ವಿರುಷ್ಕಾ: ಸಿಕ್ಕಾಪಟ್ಟೆ ವೈರಲ್

ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ, ನಿರ್ಮಾಪಕಿ ಅನುಷ್ಕಾ ಶರ್ಮಾ ದಂಪತಿ ಜನವರಿ 11ರಂದು ಮೊದಲ ಮಗುವಿಗೆ ಜನ್ಮ ನೀಡಿದ್ದರು. ಹೆಣ್ಣು ಮಗುವಿನ ತಂದೆಯಾಗಿರುವ ವಿಚಾರವನ್ನು ಸ್ವತಃ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದರು. ಮಗು ಜನಿಸಿದ ಮೇಲೆ ಎಲ್ಲಿಯೂ ಮಗಳ ಫೋಟೋವನ್ನು ಹೊರಜಗತ್ತಿಗೆ ವಿರುಷ್ಕಾ ದಂಪತಿ ತೋರಿಸಿರಲಿಲ್ಲ.

ಇದೀಗ ಇದೆ ಮೊದಲ ಬಾರಿಗೆ ಇಬ್ಬರೂ ತಮ್ಮ ಮಗುವಿನೊಂದಿಗೆ ಕಾಣಿಸಿಕೊಂಡಿದ್ದಾರೆ.. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರು ತಮ್ಮ ಮುದ್ದು ಮಗಳನ್ನು ಎತ್ತಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಆದರೆ ಈ ಫೋಟೋದಲ್ಲಿ ಮಗುವಿನ ಮುಖ ಮಾತ್ರ ಕಾಣಿಸಿಲ್ಲ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಅಂದಹಾಗೆ ಅನುಷ್ಕಾ ಹೆರಿಗೆ ನಿಮಿತ್ತ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ ವಿರಾಟ್​ ಕೊಹ್ಲಿ, ತಮಗೆ ಮಗಳು ಹುಟ್ಟಿದ ವಿಷಯವನ್ನು ಟ್ವಿಟರ್​ ಮೂಲಕ ಹಂಚಿಕೊಂಡಿದ್ದರು. ನಮ್ಮ ಜೀವನದ ಹೊಸ ಅಧ್ಯಾಯ ಇಂದಿನಿಂದ ಶುರುವಾಯಿತು ಎಂದು ಹೇಳಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top