fbpx
ಸಮಾಚಾರ

ಬಿಜೆಪಿ ಸರ್ಕಾರದ ವಿರುದ್ಧ ದ್ರುವ ಸರ್ಜಾ ಆಕ್ರೋಶ: ನಟನ ಆ ಪ್ರಶ್ನೆಗೆ ಉತ್ತರಿಸುವುದೇ ಸರ್ಕಾರ?

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅವರು ಕಿಡಿಕಾರಿದ್ದಾರೆ. ಹೌದು. ಚಿತ್ರಮಂದಿರ ಶೇ.100 ಭರ್ತಿಗೆ ನಿರ್ಬಂಧ ಹೇರಿ, ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

 

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಧ್ರುವ, “ಮಾರ್ಕೆಟ್‍ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ” ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್‍ಗೆ ಟ್ಯಾಗ್ ಮಾಡಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಸೂಚಿಸಿತ್ತು. ಆದರೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಇದರಿಂದ ಚಿತ್ರರಂಗದವರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನು ಧ್ರುವ ಸರ್ಜಾ ಅವರ ಪ್ರಶ್ನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಸಾಥ್ ನೀಡಲಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಇಂದು ಚರ್ಚೆ ನಡೆಸುವ ಸಾಧ್ಯತೆ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top