fbpx
ಸಮಾಚಾರ

ಕೋರ್ಟ್‌ ಆವರಣದಲ್ಲೇ ಭಗವಾನ್‌ ಮುಖಕ್ಕೆ ಮಸಿ ಬಳಿದ ವಕೀಲೆ

ಕೋರ್ಟ್‌ ಆವರಣದಲ್ಲಿ ಸಾಹಿತಿ ಭಗವಾನ್‌ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಇಂದು ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್‌ ಕೋರ್ಟ್‌ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್‌ ಮುಖಕ್ಕೆ ಮಸಿ ಬಳಿದಿದ್ದಾರೆ.

ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಭಗವಾನ್ ಅವರ ವಿರುದ್ಧ ಹಿಂದೂ ಧರ್ಮದ ಬಗ್ಗೆ ನೀಡಿದ ಹೇಳಿಕೆ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಭಗವಾನ್ ರವರು ಇಂದು ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅವರು ಕೋರ್ಟ್‌ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಮುಖಕ್ಕೆ ಮಸಿ ಬಳಿದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top