fbpx
ಸಮಾಚಾರ

ಕೊರೋನಾ ಕಿತ್ತುಕೊಂಡ ಸಮಯ ಸರಿದೂಗಿಸಲು ಶಾಲೆಗಳಿಗೆ ಬೇಸಿಗೆ ರಜೆ ಕಡಿತ

ಕೊರೊನಾ ಮಹಾಮಾರಿಯಿಂದಾಗಿ ವ್ಯರ್ಥವಾದ ಶಾಲಾ ವಾರ್ಷಿಕ ಅವಧಿ ಸರಿದೂಗಿಸಲು ಈ ಬಾರಿ ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಮಂಗಳವಾರ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದ ಶಾಲೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ”ಕಳೆದುಹೋದ ಸಮಯವನ್ನು ಸರಿದೂಗಿಸಲು ಮತ್ತು ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವುದನ್ನು ತಡೆಯಲು, ಶಿಕ್ಷಣ ಇಲಾಖೆಯು ರಜಾದಿನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ರಜೆ ರದ್ದುಪಡಿಸುವುದಿಲ್ಲ,” ಎಂದು ತಿಳಿಸಿದರು.

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದೆ ಇರುವುದರಿಂದ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ. ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಪರೀಕ್ಷೆಗಳು ಜೂನ್‌ನಲ್ಲಿ ಕೊನೆಗೊಳ್ಳುತ್ತವೆ ಮತ್ತು ಮುಂದಿನ ಶೈಕ್ಷಣಿಕ ವರ್ಷವು ಜುಲೈ ಆರಂಭದಲ್ಲಿ ಪ್ರಾರಂಭವಾಗುವುದರಿಂದ, ಬೇಸಿಗೆ ರಜಾದಿನಗಳನ್ನು ಕಡಿತ ಮಾಡಲಾಗುವುದು. ಆದರೆ ರದ್ದುಗೊಳಿಸುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top