fbpx
ಸಮಾಚಾರ

ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಿಕೆಶಿ ಪುತ್ರಿ ಐಶ್ವರ್ಯ ಶಿವಕುಮಾರ್: ಫೋಟೋ ವೈರಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನವಾದ ನೆನ್ನೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ.

 

 

ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ಖಾಸಗಿ ಹೋಟೆಲಿನಲ್ಲಿ ಐಶ್ವರ್ಯ ಮತ್ತು ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ವಿವಾಹ ನೆರವೇರಿದೆ. ಬೆಳಗ್ಗೆ 9 ರಿಂದ 9-45ರ ನಡುವಿನ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಗಿದೆ.

 

 

ಡಿ.ಕೆ ಶಿವಕುಮಾರ್ ಪುತ್ರಿಯ ಮದುವೆ ಸಮಾರಂಭದಲ್ಲಿ ಆಯ್ದ ಗಣ್ಯರು ಹಾಗೂ ಸಂಬಂಧಿಕರಿಗಷ್ಟೇ ಆಹ್ವಾನಿಸಲಾಗಿದೆ. ಅದ್ದೂರಿಯಾಗಿ ಮದುವೆ ನೇರವೇರಿದೆ. ಕನ್ಯಾದಾನದ ವೇಳೆ ಡಿಕೆ ಶಿವಕುಮಾರ್ ಕಣ್ಣೀರು ಇಟ್ಟಿದ್ದಾರೆ. ಡಿ.ಕೆಶಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಇನ್ನು ಈ ಅದ್ದೂರಿ ಮದೆವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top