fbpx
ಸಮಾಚಾರ

ಯುವರಾಜ್ ಸಿಂಗ್ ವಿರುದ್ಧ ಜಾತಿ ನಿಂದನೆ ಕೇಸ್‌ ದಾಖಲು

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಲೈವ್ ಚಾಟ್ ನಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಯುವರಾಜ್ ಸಿಂಗ್ ವಿರುದ್ಧ ಜಾತಿ ನಿಂದನೆ ಕೇಸ್ ಎಫ್ಐಆರ್ ದಾಖಲಿಸಲಾಗಿದೆ.

ಕಳೆದ ವರ್ಷದ ಜೂನ್‌ ತಿಂಗಳಿನಲ್ಲಿ ರೋಹಿತ್ ಶರ್ಮಾ ಜೊತೆ ಇನ್ ಸ್ಟಾಗ್ರಾಮ್ ಲೈವ್ ಸಂವಾದಲ್ಲಿ ಪಾಲ್ಗೊಂಡಿದ್ದ ಯುವರಾಜ್, ಯಜುವೇಂದ್ರ ಚಹಲ್ ಅವರನ್ನು ʼಭಂಗಿʼ ಎಂದು ಕರೆದಿದ್ದರು. ಈ ವಿಚಾರಕ್ಕೆ ವಕೀಲ ರಜತ್‌ ಕಾಲ್ಸನ್‌ ದೂರು ನೀಡಿದ್ದರು. ಆದರೆ 8 ತಿಂಗಳ ಬಳಿಕ ಹಿಸ್ಸಾರ್‌ ಜಿಲ್ಲೆಯ ಹಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್‌ 153, 153ಎ, 295, 505 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಡಿ ಕೇಸ್‌ ದಾಖಲಾಗಿದೆ.

 

 

ಏನಿದು ಪ್ರಕರಣ?
ರೋಹಿತ್‌ ಶರ್ಮಾ ಜೊತೆಗಿನ ಸಂವಾದಲ್ಲಿ ಕುಲದೀಪ್‌ ಮತ್ತು ಯಜುವೇಂದ್ರ ಚಾಹಲ್‌ ಇದ್ದರು. ಮಾತುಕತೆಯ ವೇಳೆ ಯುವರಾಜ್‌ ಚಹಲ್‌ ಅವರನ್ನು ಭಂಗಿ ಎಂದು ಕರೆದಿದ್ದರು. ಯುವಿ ಬಳಸಿದ ಈ ಪದಕ್ಕೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿತ್ತು.

ಭಂಗಿ ಪದ ಉತ್ತರ ಭಾರತದ ಕಡೆ ಜಾತಿ ಸೂಚಕ ಪದವನ್ನಾಗಿ ಬಳಸಲಾಗುತ್ತದೆ. ಹೀಗಾಗಿ ಯುವಿ ಉದ್ದೇಶಪೂರ್ವಕವಾಗಿ ಜಾತಿ ನಿಂದಿಸಿದ್ದಾರೆ ಎಂದು, ರಜತ್ ಕಾಲ್ಸನ್ ದೂರು ನೀಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top