fbpx
ಸಮಾಚಾರ

ನಟ ರಾಘವೇಂದ್ರ ರಾಜ್‌ಕುಮಾರ್ ಅಸ್ವಸ್ಥ: ದಿಢೀರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ (ಫೆ.16) ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಯಶವಂತಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಯ ಸಲುವಾಗಿ ದಾಖಲು ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ರಾಘವೇಂದ್ರ ರಾಜಕುಮಾರ್ ಅವರಿಗೆ ಸದ್ಯದ ಮಾಹಿತಿ ಪ್ರಕಾರ ಯಾವುದೇ ಗಂಭೀರ ಸಮಸ್ಯೆ ಇಲ್ಲ. ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಿನಿಮಾ ಶೂಟಿಂಗ್ ವೇಳೆ ಸುಸ್ತಾಗಿದ್ದ ರಾಘವೇಂದ್ರ ರಾಜ್‍ಕುಮಾರ್, ನಿನ್ನೆಯಷ್ಟೇ ಹೊಸ ಸಿನಿಮಾ ‘ಬೆಳಕು’ ವಿನ ಮುಹೂರ್ತ ಆಗಿತ್ತು. ಈ ಸಂಬಂಧ ಇಂದು ನಟ ಸುದ್ದಿಗೋಷ್ಟಿ ನಡೆಸಿದ್ದರು. ಅಲ್ಲದೆ ಮೊನ್ನೆಯಷ್ಟೇ ದಾವಣಗೆರೆಗೆ ತೆರಳಿದ್ದರು. ಪೊಗರು ಆಡಿಯೋ ಲಾಂಚ್ ನಲ್ಲಿ ಭಾಗಿಯಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top