fbpx
ಸಮಾಚಾರ

ಧೋನಿ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಗೆಲ್ಲುವುದರ ಮೂಲಕ ನಾಯಕನಾಗಿ ವಿರಾಟ್ ಕೊಹ್ಲಿ ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ತವರಿನಲ್ಲಿ ವಿರಾಟ್ ಕೊಹ್ಲಿ ಒಟ್ಟು 28 ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ 21 ಜಯ, 2 ಸೋಲು, 5 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ಧೋನಿ ತವರಿನಲ್ಲಿ 30 ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ 21 ಜಯ, 3 ಸೋಲು, 6 ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ. ಈ ಮೂಲಕ ಕೊಹ್ಲಿಗೆ ಧೋನಿ ದಾಖಲೆಯನ್ನು ಮುರಿಯಲು ಒಂದು ಹೆಚ್ಚೆ ಮಾತ್ರ ಬಾಕಿ ಇದೆ.

ಧೋನಿ ದಾಖಲೆಯನ್ನು ಸರಿಗಟ್ಟಿರುವ ಕೊಹ್ಲಿಗೆ ಇನ್ನು ಒಂದು ಗೆಲುವು ದೊರೆತರೆ ನಾಯಕನಾಗಿ ತವರಿನಲ್ಲಿ ಅತೀ ಹೆಚ್ಚು ಗೆಲುವು ಕಂಡ ಕ್ಯಾಪ್ಟನ್ ಆಗಿ ಕಿಂಗ್ ಕೊಹ್ಲಿ ಹೊರಹೊಮ್ಮಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top