fbpx
ಸಮಾಚಾರ

“ಭಯೋತ್ಪಾದನೆ ಹರಡುತ್ತಿರುವವರ ಪೈಕಿ ವಿದ್ಯಾವಂತರೇ ಹೆಚ್ಚು” ಪ್ರಧಾನಿ ಮೋದಿ!

ವಿಶ್ವದಲ್ಲಿ ವಿದ್ಯಾವಂತರೇ ಹೆಚ್ಚಾಗಿ ಭಯೋತ್ಪಾದನೆ ಹರಡುತ್ತಿದ್ದಾರೆ. ಒಂದು ವರ್ಗ, ದೇಶದಲ್ಲಿ ಅಶಾಂತಿ ಸೃಷ್ಟಿಸುವ, ಭಯೋತ್ಪಾದನೆಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿದೆ. ಆದರೆ ಈ ವರ್ಗದಲ್ಲಿ ವಿದ್ಯಾವಂತರೇ ಹೆಚ್ಚಿದ್ದಾರೆ ಎಂದು ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಪ್ರಧಾನ ಮಂತ್ರಿ ಮೋದಿ, ನಿಮ್ಮ ಮನಸ್ಸು ಸಕಾರಾತ್ಮಕವಾಗಿದೆಯೇ, ಋಣಾತ್ಮಕವಾಗಿದೆಯೇ ಎಂಬುದರ ಮೇಲೆ ನೀವು ಮಾಡುವ ಕೆಲಸ ಅವಲಂಬಿತವಾಗಿರುತ್ತದೆ. ಇಲ್ಲಿ ಇಬ್ಬರಿಗೂ ಅವಕಾಶವಿದೆ. ಎರಡೂ ಗುಣದ ವ್ಯಕ್ತಿಗಳಿಗೆ ದಾರಿಯಿದೆ. ನಾವು ಸಮಸ್ಯೆಯ ಭಾಗವಾಗಬೇಕೆ ಅಥವಾ ಪರಿಹಾರ ಹುಡುಕುವವರಾಗಬೇಕೆ ಎಂಬುದನ್ನು ತೀರ್ಮಾನಿಸುವುದು ನಮ್ಮ ಕೈಯಲ್ಲಿದೆ ಎಂದರು.

ನವ ಭಾರತ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿ ಪ್ರಮುಖವಾಗಿದೆ. ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ಸದೃಢ ಭಾರತ ನಿರ್ಮಾಣವಾಗಲಿದೆ ಎಂದು ಮೋದಿ ಹೇಳಿದರು. ಇನ್ನು ಪಶ್ಚಿಮ ಬಂಗಾಳ ರಾಜ್ಯ ಪಾಲ ಜಗದೀಪ್ ಧನ್‌ಕರ್ ಘಟಿಕೋತ್ಸವಲ್ಲಿ ಪಾಲ್ಗೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top