fbpx
ಸಮಾಚಾರ

ಈ ದೇಶದ ಪ್ರಜೆಯಾಗಿ ಲೆಕ್ಕ ಕೇಳೋ ಅಧಿಕಾರ ನನಗೆ ಇದೆ: ಸಿದ್ದರಾಮಯ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದ್ದು, ಇತ್ತ ಕರ್ನಾಟಕದಲ್ಲಿ ದೇಣಿಗೆ ಸಂಗ್ರಹ ವಿಚಾರವಾಗಿ ರಾಜಕೀಯ ಕೆಸರೆರಚಾಟಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಈ ದೇಶದ ಪ್ರಜೆ, ಲೆಕ್ಕ ಕೇಳುವ ಅಧಿಕಾರ ನನಗಿದೆ ಎಂದು ಗುಡುಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ರಾಮಮಂದಿರಕ್ಕೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕೆ ಕೊಡಬೇಕಾಗಿರುವುದು ಅವರ ಕೆಲಸ ಕೇಳುವುದು ನಮ್ಮ ಹಕ್ಕು ಎಂದು ಕಟುವಾಗಿ ಹೇಳಿದ್ದಾರೆ.

ಲೆಕ್ಕೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗವಾಗುತ್ತಿದೆ. ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಅವರೇ ಹೇಳಬೇಕು ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top