fbpx
ಸಮಾಚಾರ

ನಟ ಸಂದೀಪ್ ನಹರ್ ಆತ್ಮಹತ್ಯೆ ಪ್ರಕರಣ: ಪತ್ನಿ ಹಾಗೂ ಅತ್ತೆಯ ವಿರುದ್ಧ ಎಫ್ಐಆರ್ ದಾಖಲು

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟ ಸಂದೀಪ್ ನಹರ್ ಪತ್ನಿ ಕಾಂಚನ್ ಮತ್ತು ಆಕೆಯ ತಾಯಿ ವಿರುದ್ಧ ಗೋರೆಂಗಾವ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂದೀಪ್ ನಹರ್ ಆತ್ಮಹತ್ಯೆ ನಂತರ ಆತನ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ ವಿಶಾಲ್ ಠಾಕೂರ್ ಸ್ಪಷ್ಟ ಪಡಿಸಿದ್ದಾರೆ. ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನಿನ ಪ್ರಕಾರ ಮುಂದಿನ ನಿಯಮಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಸಂದೀಪ್ ಅವರ ಪೋಷಕರು ಕಾಂಚನ್ ಮತ್ತು ಅವರ ತಾಯಿಯ ವಿರುದ್ಧ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬುದು ಈಗ ಬೆಳಕಿಗೆ ಬಂದಿದೆ. ಎಂ.ಎಸ್ ಧೋನಿ: ದಿ ಅನ್ ಟೋಲ್ಡ್ ಸಿನಿಮಾದಲ್ಲಿ ನಟಿಸಿದ್ದ ಸಂದೀಪ್ ನಹರ್ ಫೆಬ್ರವರಿ 15 ರಂದು ಆತ್ಮಹತ್ಯೆಗೆ ಶರಣಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top