fbpx
ಸಮಾಚಾರ

ಶೂಟಿಂಗ್‍ ಸೆಟ್‌ಗೆ ನುಗ್ಗಿ ಜಗ್ಗೇಶ್ ಗೆ ಮುತ್ತಿಗೆ ಹಾಕಿದ ದರ್ಶನ್ ಅಭಿಮಾನಿಗಳು– ಕ್ಷಮೆ ಕೇಳಿದ ನವರಸ ನಾಯಕ

ಕೆಲ ದಿನಗಳ ಹಿಂದಷ್ಟೆ ಸ್ಯಾಂಡಲ್‍ವುಡ್ ನವರಸ ನಾಯಕ ಜಗ್ಗೇಶ್ ಅವರದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು. ಖುದ್ದು ಜಗ್ಗೇಶ್ ಅವರೇ ಈ ಬಗ್ಗೆ ಟ್ವೀಟ್ ಮೂಲಕ ಅದಕ್ಕೆ ಸಮಜಾಯಿಷಿ ನೀಡಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ಈ ವಿವಾದಕ್ಕೆ ಮತ್ತೆ ಕಿಡಿ ಹೊತ್ತಿಕೊಂಡಿದೆ. ಡಿಬಾಸ್ ದರ್ಶನ್ ಅಭಿಮಾನಿಗಳು ನಟ ಜಗ್ಗೇಶ್ ಅವರನ್ನು ಮುತ್ತಿಗೆ ಹಾಕಿದ್ದು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

 

 

ಮೈಸೂರಿನ ಬನ್ನೂರು ಬಳಿಯ ಹತ್ತಿಹಾಳದಲ್ಲಿ ತೋತಾಪುರಿ ಶೂಟಿಂಗ್ ನಡೆಯುತ್ತಿದ್ದ ಸ್ಥಳಕ್ಕೆ ಧಾವಿಸಿದ ದರ್ಶನ್ ಅಭಿಮಾನಿಗಳು, ಕ್ಷಮೆ ಕೇಳುವಂತೆ ಜಗ್ಗೇಶ್ ಅವರಿಗೆ ಪಟ್ಟು ಹಿಡಿದರು. ಈ ವೇಳೆ ಸ್ಪಷ್ಟನೆ ನೀಡಲು ಮುಂದಾದ ಜಗ್ಗೇಶ್ ಹಾಗೂ ಅಭಿಮಾನಿಗಳ ನಡುವೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು.

`ಡಿ ಬಾಸ್’ ಅಭಿಮಾನಿಗಳ ಕ್ಷಮೆ ಕೇಳಿದ ಜಗ್ಗೇಶ್, ದರ್ಶನ್ ಮತ್ತು ನನ್ನ ನಡುವೆ ತಂದಿಡುವ ಹುನ್ನಾರ ಮಾಡಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ರಾಜಕೀಯ ಇದೆ. ಪಿತೂರಿ ಮಾಡಿದ್ದಾರೆ. ನಾನು ದರ್ಶನ್ ಬಗ್ಗೆ ಆ ರೀತಿ ಮಾತನಾಡಲೇ ಇಲ್ಲ. ನಾನು ಒಂದು ಪತ್ರಿಕೆಯ ಬಗ್ಗೆ ಮಾತನಾಡಿದೆ. ಈ ವಿಚಾರವನ್ನು ಇಟ್ಟುಕೊಂಡು ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ನನಗೆ ಇದಕ್ಕೂ ಸಂಬಂಧವಿಲ್ಲ, ಇಂಡಸ್ಟ್ರೀಯಲ್ಲಿ ದೊಡ್ಡ ರಾಜಕೀಯ ನಡೆಯುತ್ತಿದೆ ಎಂದು ದರ್ಶನ್ ಅಭಿಮಾನಿಗಳಿಗೆ ನಟ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top