fbpx
ಸಮಾಚಾರ

‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ ಆರೋಪ: ಹೋರಾಟದ ಎಚ್ಚರಿಕೆ

ಕಳೆದ ವಾರವಷ್ಟೇ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪೊಗರು’ ಚಿತ್ರವು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ದೃಶ್ಯಗಳಿವೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯದವರು ಆಕ್ರೋಶ ಹೊರಹಾಕುತ್ತಿದ್ದಾರೆ

ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡೋ ದೃಶ್ಯ ಇದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ‌ಮೂರ್ತಿ ಆರೋಪ ಮಾಡಿದ್ದಾರೆ. ಕೂಡಲೇ ಚಿತ್ರತಂಡ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಬ್ರಾಹ್ಮಣ ಸಮುದಾಯದ ಬಗ್ಗೆ ಪೊಗರು ಸಿನಿಮಾದಲ್ಲಿ ಅವಹೇಳನಕಾರಿಯಾದ ಹೇಳಿಕೆಗಳಿವೆ. ಇದರಿಂದ ಸಮುದಾಯದ ಜನರಿಗೆ ನೋವುಂಟಾಗಿದೆ. ಕೂಡಲೇ ಚಿತ್ರತಂಡ, ಪೊಗರು ಚಿತ್ರದ ನಿರ್ದೇಶಕ, ನಿರ್ಮಾಪಕರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಾಣಿಜ್ಯ ಮಂಡಳಿಗೆ ದೂರು ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಸಿನಿಮಾದಲ್ಲಿರುವ ದೃಶ್ಯವನ್ನು ತೆಗೆದುಹಾಕಬೇಕು. ಇಲ್ಲದಿದ್ದರೆ ಮುಂದೆ ಹೋರಾಟ ಮಾಡ್ತೀವಿ ಎಂದು ಸಚ್ಚಿದಾನಂದ‌ಮೂರ್ತಿ ಪೊಗರು ಸಿನಿಮಾ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾದಲ್ಲಿ ಏನಿದೆ?
ಸಿನಿಮಾದಲ್ಲಿ ಬ್ರಾಹ್ಮಣ ಅರ್ಚಕನ ಭುಜದ ಮೇಲೆ ಖಳನಾಯಕ ಕಾಲಿಡುತ್ತಾನೆ, ಇನ್ನು ಊಟ-ತಿಂಡಿ ವಿಚಾರದ ಬಗ್ಗೆ ಕೂಡ ಮಾತನಾಡಲಾಗಿದೆ. ಚಿತ್ರದಲ್ಲಿ ರಶ್ಮಿಕಾ ಕುಟುಂಬ ವೈದಿಕ ಕುಟುಂಬವಾಗಿರುತ್ತದೆ. ರಶ್ಮಿಕಾಗೆ ಟಾಂಗ್ ಕೊಡುವಾಗ, ಅರ್ಚಕರ ಜೊತೆ ಮಾತನಾಡುವಾಗ ಕೆಲ ಡೈಲಾಗ್‌ಗಳು ಇವೆ. ಈ ಬಗ್ಗೆ ಬ್ರಾಹ್ಮಣ ಸಮುದಾಯ ಆರೋಪ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top