ಕಳೆದ ವಾರವಷ್ಟೇ ತೆರೆಕಂಡು ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಪೊಗರು ಚಿತ್ರ ಈಗ ವಿವಾದದ ಕೇಂದ್ರಬಿಂದುವಾಗಿದೆ. ಚಿತ್ರದದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗೆ ಧಕ್ಕೆಯಾಗುವಂತೆ ಚಿತ್ರಳಾಗಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯದವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಬ್ರಾಹ್ಮಣ ಸಮುದಾಯದ ಸಂಘಟನೆಗಳು ಸೆನ್ಸಾರ್ ಮಂಡಳಿ ಎದುರು ಪ್ರತಿಭಟನೆ ಕೈಗೊಂಡಿವೆ. ‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸೆನ್ಸಾರ್ ಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿದ್ದಾರೆ.
“ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನ ಟಾರ್ಗೆಟ್ ಮಾಡಲಾಗ್ತಿದೆ . ಪೊಗರು ಸಿನಿಮಾದಲ್ಲಂತೂ ಬ್ರಾಹ್ಮಣ ಸಮುದಾಯಕ್ಕೆ ತೀರ ಅವಮಾನ ಮಾಡಲಾಗಿದೆ. ಬ್ರಾಹ್ಮಣರ ಸ್ವಾಭಿಮಾನವನ್ನ ಕೆಣಕಲಾಗುತ್ತಿದೆ. ಸೆನ್ಸಾರ್ ಮಂಡಳಿ ಚಿತ್ರವನ್ನ ಸೆನ್ಸಾರ್ ಮಾಡುವಾಗ ಈ ಎಲ್ಲ ಅಂಶಗಳನ್ನ ಗಮನಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
