fbpx
ಸಮಾಚಾರ

ಧೋನಿ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಮುರಿಯುವ ಸನಿಹದಲ್ಲಿದ್ದಾರೆ. ಭಾರತೀಯ ನೆಲದಲ್ಲಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ನಾಯಕ ಎಂಬ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಕೊಹ್ಲಿ ಇದ್ದಾರೆ..

ನಾಳೆ(ಫೆಬ್ರವರಿ 24) ಅಹಮದಾಬಾದ್ ನ ಮೊಟೇರಾ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಗೆಲುವು ಕಂಡರೆ ನಾಯಕ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದ್ದಾರೆ.. ಭಾರತದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

ಇಲ್ಲಿಯವರೆಗೂ ಒಟ್ಟು 28 ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ 21 ಜಯ, 2 ಸೋಲು, 5 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ. ಧೋನಿ ತವರಿನಲ್ಲಿ 30 ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ 21 ಜಯ, 3 ಸೋಲು, 6 ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ. ಈ ಮೂಲಕ ಕೊಹ್ಲಿಗೆ ಧೋನಿ ದಾಖಲೆಯನ್ನು ಮುರಿಯಲು ಒಂದು ಹೆಚ್ಚೆ ಮಾತ್ರ ಬಾಕಿ ಇದೆ.

ನಾಯಕನಾಗಿ ವಿರಾಟ್ ಕೊಹ್ಲಿ ಒಟ್ಟು 58 ಟೆಸ್ಟ್ ಪಂದ್ಯಾಟಗಳನ್ನು ಮುನ್ನಡೆದ್ದು 34 ಜಯ, 14 ಸೋಲು ಮತ್ತು 10 ಪಂದ್ಯವನ್ನು ಡ್ರಾ ಮಾಡಿಕೊಂಡರೆ ಧೋನಿ 60 ಟೆಸ್ಟ್ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿ 27 ಜಯ, 18 ಸೋಲು ಮತ್ತು 15 ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top