fbpx
ಸಮಾಚಾರ

NTPC ನೇಮಕಾತಿ 2021: 230 ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಸಹಾಯಕ ಇಂಜಿನಿಯರ್, ಸಹಾಯಕ ಕೆಮಿಸ್ಟ್ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 10, 2021ರೊಳಗೆ ಸಲ್ಲಿಸಬಹುದು.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವ‍ರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:
ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ntpccareers.net/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top