fbpx
ಸಮಾಚಾರ

‘ಪೊಗರು’ ವಿವಾದ: ಭೇಷರತ್ ಕ್ಷಮೆ ಕೇಳಿದ ಧ್ರುವ ಸರ್ಜಾ

ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಆಗಿದೆ ಎಂಬ ವಿಚಾರಕ್ಕೆ ಗಾಂಧಿನಗರದಲ್ಲಿ ಎದ್ದಿರುವ ವಿವಾದ ಸದ್ಯಕ್ಕೆ ತಣ್ಣಗಾಗಿದ್ದು ಚಿತ್ರದ ನಾಯಕ ನಟ ಧ್ರುವ ಸರ್ಜಾ ಅವರು ಬ್ರಾಹ್ಮಣ ಸಮುದಾಯದವರ ಬಳಿ ಬೇಷರತ್ ಕ್ಷಮೆ ಕೋರಿದ್ದಾರೆ..

 

 

ಧ್ರುವ ಸರ್ಜಾ ಈ ಕುರಿತಂತೆ ಟ್ವೀಟ್ ಮಾಡಿದ್ದು “ನಮ್ಮ ಇಡೀ ಕುಟುಂಬ ಹನುಮ ಭಕ್ತರು, ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ದತಿ ಆಚರಿಸುತ್ತಾ, ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿ ಬದುಕಿದ್ದೇವೆ.

“ಕಲೆಯೇ ಧರ್ಮ, ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹಾ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿ ಬೇಷರತ್ ಕ್ಷಮೆ ಕೇಳುತ್ತೇನೆ.

“ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತನಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ದವಾಗಿದೆ.ನನ್ನ ಮನವಿಯನ್ನು ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ.” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top