fbpx
ಸಮಾಚಾರ

ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ‘ದಾವಣಗೆರೆ ಎಕ್ಸ್​​ಪ್ರೆಸ್​’​ ವಿನಯ್​ ಕುಮಾರ್

ದಾವಣಗೆರೆ ಎಕ್ಸ್​ಪ್ರೆಸ್​ ಖ್ಯಾತಿಯ ಕ್ರಿಕೆಟರ್​ ‘ವಿನಯ್ ಕುಮಾರ್’​ ಇಂದು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಎರಡು ಪುಟಗಳ ಪತ್ರವನ್ನು ಬರೆದು ಅದನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳುವ ಮೂಲಕ ವಿನಯ್​ ಕುಮಾರ್​ ತಮ್ಮ ಕ್ರಿಕೆಟ್​ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

 

 

ಈ ಕುರಿತು ಟ್ವೀಟ್ ಮಾಡಿರುವ ವಿನಯ್ ಕುಮಾರ್, ಕಳೆದ 25 ವರ್ಷಗಳಲ್ಲಿ ಅನೇಕ ಸ್ಟೇಷನ್‌ಗಳನ್ನು ಹಾದು ಹೋಗಿರುವ ದಾವಣಗೆರೆ ಎಕ್ಸ್‌ಪ್ರೆಸ್, ಕೊನೆಗೂ ನಿವೃತ್ತಿ ಎಂಬ ಸ್ಟೇಷನ್‌ಗೆ ತಲುಪಿದೆ. ಮಿಶ್ರ ಭಾವನೆಗಳೊಂದಿಗೆ ಈ ಮುಖಾಂತರ ಅಂತರ ರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದೊಂದು ಸುಲಭವಾದ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಂತೆ ನನ್ನ ಜೀವನದಲ್ಲೂ ಆ ದಿನ ಬಂದಿದೆ ಎಂದು ಭಾವುಕ ಸಂದೇಶದಲ್ಲಿ ತಿಳಿಸಿದರು.

ಭಾರತ ಶ್ರೇಷ್ಠ ಆಟಗಾರರಾದ ಅನಿಲ್​ ಕುಂಬ್ಳೆ, ರಾಹುಲ್​ ದ್ರಾವಿಡ್​, ಎಂ.ಎಸ್​. ಧೋನಿ, ವೀರೇಂದ್ರ ಸೆಹ್ವಾಗ್​, ಗೌತಮ್​ ಗಂಭೀರ್, ವಿರಾಟ್​ ಕೊಹ್ಲಿ, ಸುರೇಶ್​ ರೈನಾ, ರೋಹಿತ್​ ಶರ್ಮಾ ಅವರ ಆಡಿರುವುದಕ್ಕೆ ಖುಷಿದೆ ಇದೆ. ಮುಂಬೈ ಇಂಡಿಯನ್ಸ್​ ತಂಡದಲ್ಲಿ ಸಚಿನ್​ ತೆಂಡೂಲ್ಕರ್​ ನನ್ನ ಮೆಂಟರ್​ ಆಗಿರುವುದು ಖುಷಿಯ ವಿಚಾರ ಎಂದರು.

ನಾನು ನನ್ನ ಕನಸನ್ನು ನನಸಾಗಿಸಿಕೊಳ್ಳಲು ದಾವಣಗೆರೆಯಿಂದ ಬೆಂಗಳೂರಿಗೆ ಬಂದೆ. ರಾಜ್ಯ ತಂಡವನ್ನು ಪ್ರತಿನಿಧಿಸಲು ನನಗೆ ಅವಕಾಶ ನೀಡಿದ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಗೆ ಕೃತಜ್ಞನಾಗಿದ್ದೇನೆ. ಅಲ್ಲಿಂದ ನಾನು ಭಾರತ ಪರ ಆಡಲು ಹೋದೆ ಮತ್ತು ಕ್ರಿಕೆಟ್​​ನ ಎಲ್ಲಾ ಸ್ವರೂಪಗಳಲ್ಲಿ ದೇಶವನ್ನು ಪ್ರತಿನಿಧಿಸಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ ವಿನಯ್​ ಕುಮಾರ್​.

2010ರಲ್ಲಿ ಭಾರತದ ರಾಷ್ಟ್ರೀಯ ತಂಡಕ್ಕೆ ಪಾದಾಪರ್ಣೆ ಮಾಡಿದ್ದ ವಿನಯ್​ ಕುಮಾರ್ ಭಾರತದ ಪರ ಒಟ್ಟು 31 ODIಪಂದ್ಯಗಳನ್ನು ಆಡಿದ್ದು, 31 ವಿಕೆಟ್​ ಕಬಳಿಸಿದ್ದಾರೆ. ಇನ್ನೂ ಆಸ್ಟ್ರೇಲಿಯಾ ವಿರುದ್ಧ 2012ರಲ್ಲಿ ಒಂದೇ ಒಂದು ಟೆಸ್ಟ್​ ಪಂದ್ಯವನ್ನು ಆಡಿರುವ ವಿನಯ್ ಕುಮಾರ್​ 1 ವಿಕೆಟ್​ ಕಬಳಿಸುವಲ್ಲಿ ಮಾತ್ರ ಸಫಲರಾಗಿದ್ದಾರೆ. ಇನ್ನು 9 ಟಿ-20 ಪಂದ್ಯಗಳನ್ನು ಆಡಿದ್ದು, 10 ವಿಕೆಟ್​ ಕಬಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top