fbpx
ಸಮಾಚಾರ

ನಟ ಅಮಿತಾಬ್‌ ಬಚ್ಚನ್‌ಗೆ ಮತ್ತೆ ಶಸ್ತ್ರಚಿಕಿತ್ಸೆ..!

ಇತ್ತೀಚಿಗಷ್ಟೇ ಕೊರೋನಾಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 78 ವರ್ಷ ವಯಸ್ಸಿನ ಅಮಿತಾಬ್ ಬಚ್ಚನ್ ಅವರು ಶೀಘ್ರವೇ ಶಸ್ತ್ರಚಿಕಿತ್ಸೆಗೆ ಒಳಪಡಲಿದ್ದಾರೆ. ಆದರೆ ಯಾವ ಸಮಸ್ಯೆಗೆ ಈ ಶಸ್ತ್ರಚಿಕಿತ್ಸೆ ಎಂದು ಅವರು ಬಹಿರಂಗಪಡಿಸಿಲ್ಲ.

 

 

ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರು ಟ್ವೀಟ್ ಮಾಡಿದ್ದು, ‘ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಯವಾಗಿದೆ…ಶಸ್ತ್ರಚಿಕಿತ್ಸೆ…ಬರೆಯಲು ಸಾಧ್ಯವಾಗುತ್ತಿಲ್ಲ…’ ಎಂದು ತಮ್ಮ ಬ್ಲಾಗ್‌ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ ಟ್ವಿಟರ್‌ನಲ್ಲಿ ಆಶ್ಚರ್ಯ ಸೂಚಕ ಮತ್ತು ಪ್ರಶ್ನಾರ್ಥಕ ಚಿಹ್ನೆಯನ್ನಷ್ಟೇ ಹಾಕಿದ್ದಾರೆ.

ಈ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಅಮಿತಾಬ್ ಬಚ್ಚನ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಾರೈಸುತ್ತಿದ್ದಾರೆ. ಈ ಮುನ್ನ ಜುಲೈನಲ್ಲಿ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಮೊಮ್ಮಗಳು ಆರಾಧ್ಯ ಕೋವಿಡ್ ಸೋಂಕಿಗೆ ಒಳಗಾಗಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top