fbpx
ಸಮಾಚಾರ

RBI ನೇಮಕಾತಿ 2021: 841 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್15, 2021 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ:
10ನೇ ತರಗತಿ (ಎಸ್‌ಎಸ್‌ಸಿ/ಮೆಟ್ರಿಕ್ಯುಲೇಶನ್) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಅರ್ಹತೆಗಳು
ಆರ್‌ಬಿಐ ಅಟೆಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವರ್ಗವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿ ಶುಲ್ಕ :
ಒಬಿಸಿ/ಸಾಮಾನ್ಯ/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ – 450 ರೂ.
ಎಸ್ಸಿ /ಎಸ್ಟಿ/ಪಿಡಬ್ಲುಡಿ/ಇಎಕ್ಸ್ ಎಸ್ : -50 ರೂಪಾಯಿ
ಬ್ಯಾಂಕ್ (Bank) ಸಿಬ್ಬಂದಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು online ಮೂಲಕ ಪಾವತಿಸಬಹುದು.

ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940/- ರಿಂದ 23,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆರ್‌ಬಿಐ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತ ಅಭ್ಯರ್ಥಿಗಳು ಅಫೀಶಿಯಲ್‌ ವೆಬ್‌ಸೈಟ್‌ https://www.rbi.org.in/home.aspx ಗೆ ಭೇಟಿ ನೀಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top