fbpx
ಸಮಾಚಾರ

ಅರ್ಚಕ ನೌಕರಿಯನ್ನು ಸರ್ಕಾರ ಕೇವಲ ಬ್ರಾಹ್ಮಣರಿಗೆ ಮಾತ್ರ ಮೀಸಲಿಡಬೇಕು: ಪೇಜಾವರ ಶ್ರೀ

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ರಾಜ್ಯ ಸರ್ಕಾರವು ಸಮಾಜದ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸುತ್ತಿದೆ, ಸರ್ಕಾರ ಹೀಗೆ ಮಾಡದೇ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ತಿಳಿಸಿದ್ದಾರೆ.

ಮೈಸೂರು ನಗರದ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಿಪ್ರ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ಏನು ಹೇಳಲಿ ಎಂದು ತೋಚುತ್ತಿಲ್ಲ. ಈ ಸಮಸ್ಯೆಗಳು ಪರಿಹಾರವಾಗಲು ಸಮುದಾಯ ಸಂಘಟನೆಯಾಗುವುದೇ ಪರಿಹಾರ” ಎಂದು ಅಭಿಪ್ರಾಯಪಟ್ಟರು.

ನಮ್ಮ ಕಾನೂನಿನಲ್ಲಿ ರೈಲ್ವೇ ನಿಲ್ದಾಣಗಳಲ್ಲಿ ಕೆಲಸ ಮಾಡುವ ಹಮಾಲಿಗಳಿಗೆ ತಮ್ಮ ಜೀವನ ತಾವು ನಡೆಸಲು ಅವಕಾಶವಿದ್ದರೆ, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿ. ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಈ ಎಲ್ಲಾ ಸಮಸ್ಯೆಗಳೊಳಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರ. ನಮ್ಮ ಮೇಲೆ ದಾಳಿ ಮಾಡುತ್ತಿರುವವರ ವಿರುದ್ಧ ಹೋರಾಡಲು ಸಂಘಟನೆ ಅತ್ಯವಶ್ಯ ಎಂದು ಪ್ರತಿಪಾದಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top