fbpx
ಸಮಾಚಾರ

ಬ್ರೇಕಿಂಗ್ ನ್ಯೂಸ್: ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ

ತಮ್ಮ ವಿರುದ್ದದ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೆ ಕೊನೆಗೂ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಬುಧವಾರ( ಮಾ.3) ರಾಜೀನಾಮೆ ನೀಡಿದ್ದಾರೆ.

ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಪತ್ರ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.

ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು.

ಕೆಪಿಟಿಸಿಎಲ್‍ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ತ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿತ್ತು. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಅವರು ನಿನ್ನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top